Thursday, 15th May 2025

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಅಹಮದಾಬಾದ್‌: ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು ಇದುವರೆಗೂ ಯಾವುದೇ ಪ್ರಾಣಹಾನಿಯಾದ ವರದಿಯಾಗಿಲ್ಲ. ವತ್ವಾ ಪ್ರದೇಶದಲ್ಲಿ  ಘಟನೆ ಸಂಭವಿಸಿದೆ. 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಿವೆ ಎಂದು ಮೂಲಗಳು ತಿಳಿಸಿವೆ. ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಗುಜರಾತ್‌ ಪೊಲೀಸರು ಮಾಹಿತಿ ನೀಡಿದ್ದಾರೆ. ಕಳೆದ ಭಾನುವಾರ ಬಗಾಪುರದಲ್ಲಿ ಬೆಂಕಿ ದುರಂತ ಸಂಭವಿಸಿ 20ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದ್ದವು.

ಮುಂದೆ ಓದಿ